Home ಕರ್ನಾಟಕ ಕರಾವಳಿ ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್: ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್: ಶಾಲಾ-ಕಾಲೇಜಿಗೆ ರಜೆ ಘೋಷಣೆ

0
ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್: ಶಾಲಾ-ಕಾಲೇಜಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ/ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜು ರಜೆ


ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಹಾಗೂ ಕನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಇಂದು ಎಲ್ಲಾ ಶಾಲಾ-ಕಾಲೇಜಿಗೆ ರಜೆಯನ್ನು ಘೊಷಣೆ ಮಾಡಲಾಗಿದೆ. ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜು ರಜೆ

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.
ಇನ್ನು, ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಂಭವವಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯ ಆರ್ಭಟ
ಮುಂದುವರಿದಿದ್ದು, ಕಾರವಾರ, ಭಟ್ಕಳ, ಹೊನ್ನಾವರ, ಕುಮಟ, ಅಂಕೋಲಾ ತಾಲೂಕಿನ ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕಲವಿಕಟ್ಟಿ ಆದೇಶ ಹೊರಡಿಸಿದ್ದಾರೆ.

 

LEAVE A REPLY

Please enter your comment!
Please enter your name here