
ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದ್ದು, ನಾಳೆ ಸಂಪೂರ್ಣ ಕರ್ನಾಟಕ ಬಂದ್ ಮಾಡಲು ನಿಧರಿಸಲಾಗಿದೆ. ಇದಕ್ಕೆ ಕನ್ನಡ ಚಿತ್ರರಂಗ ಕೂಡ ಸಾಥ್ ನೀಡಿದ್ದು, ನಟ ಶಿವರಾಜ್‌ಕುಮಾರ್ ಅವರ ನೇತೃತ್ವದಲ್ಲಿ ಬಂದ್ ನಡೆಯಲಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚಿತ್ರ್ಯೋದ್ಯಮ ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿಯುವುದಾಗಿ ಸೂಚಿಸಿತ್ತು. ಗುರುವಾರ ನಡೆಯುವ ಪ್ರತಿಭಟನೆಗೆ ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದಶನ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದ್ ಗೆ ಚಿತ್ರರಂಗ ಬೆಂಬಲ ನೀಡಲಿದೆ ಎನ್ನಲಾಗಿದೆ.
ಇನ್ನು, ಪ್ರತಿಭಟನೆಗೆ ನಿರ್ಮಾಪಕರು ಸಂಘ, ಕಲಾವಿದರ ಸಂಘ, ನಿರ್ದೇಶಕರು ಸಂಘ ಕೂಡ ಸಾಥ್ ನೀಡುತ್ತಿದ. ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಡೆಯುವ ಈ ಪ್ರತಿಭಟನೆಗೆ ಚಿತ್ರರಂಗದ ಸ್ಟಾರ್ ನಟರು ಸೇರಿದಂತೆ ಕಿರುತೆರೆಯ ಅನೇಕ ನಟ-ನಟಿಯರು ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
