
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. 200 ಯೂನಿಟ್ ಫ್ರೀ ವಿದ್ಯುತ್ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಮಾಡಿಕೊಡಲಾಗಿದ್ದು, ಜನರು ಮುಗಿಬಿದ್ದು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಎಲ್ಲರಿಗೂ ಫ್ರೀ ವಿದ್ಯುತ್ ಸಿಗುತ್ತದೆ ಇದಕ್ಕಗಿ ನೂಕು ನುಗ್ಗಲು ಮಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹೌದು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜನರು ನೂಕು ನುಗ್ಗಲು ಮಾಡುತ್ತಿದ್ದಾರೆ. ಸರ್ವರ್ ಸಮಸ್ಯೆಯೂ ಕೂಡ ಇದೀಗ ಬಗೆಹರಿದಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಈಗಾಗಲೇ 20,10,486 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ನಂಬರ್ಮತ್ತು ವಿದ್ಯುತ್ಬಿಲ್ನಲ್ಲಿರುವ ಆರ್ಆರ್ ನಂಬರ್ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
ಇನ್ನು, ಅರ್ಜಿಗಳನ್ನು ಕೇವಲ ಆನ್ಲೈನ್ಮೂಲಕ ಮಾತ್ರ ಅಲ್ಲದೇ ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವ ಕ್ಯೂರ್ಸ್ಕ್ಯಾನ್ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯ ಕುರಿತು ಏನಾದರೂ ಅನುಮಾನಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
