ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರು 5ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಯ ಕುರಿತು ಕೆಲವು ಗೊಂದಲಗಳು ಸೃಷ್ಟಿಯಾದ ಹಿನ್ನೆಲೆ ಇಂದು ಮಧ್ಯಾಹ್ನ12:30ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಏಪಡಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯನ್ವಯ ಸಿಗುವ 2000 ರೂ ಅತ್ತೆಗೋ ಅಥವಾ ಸೊಸೆಗೋ ಎನ್ನುವ ಗೊಂದಲ ಎದ್ದಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಂದಾಯ ಇಲಾಖೆ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲು ತೀಮಾನಿಸಲಾಗಿದೆ.
ಇನ್ನು, ಗೃಹಲಕ್ಷ್ಮೀ ಯೋಜನೆಯ ಅರ್ಜಿಯು ಇಂದು ಬಿಡುಗಡೆಯಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭೌತಿಕ ಅರ್ಜಿ ಬಿಡುಗಡೆ ಮಾಡಿದೆ. ಈ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರಗಳು ಈ ಅರ್ಜಿಯಲ್ಲಿವೆ.
