
ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ನಿಧರಿಸಿದ್ದು, ಇಂದು ಮಂಡ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸದಂತೆ ಒತ್ತಾಯಿಸಿದ್ದಾರೆ.
ಇನ್ನು, ಬೆಂಗಳೂರು, ದಾವಣಗೆರೆ, ಗದಗ ಸೇರಿದಂತೆ ರಾಜ್ಯದ ಹಲವೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾ ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
