
ತುಮಕೂರು: ಆರ್ಥಿಕ ಹೊರೆ ತಗ್ಗಿಸುವ ಸಲುವಾಗಿ ಅತಿಥಿ ಉಪನ್ಯಾಸಕರನ್ನು ತೆಗೆದುಹಾಕಿ ಸಂಶೋಧನಾ ವಿದ್ಯಾರ್ಥಿಗಳನ್ನು ಬೋಧನೆಗೆ ಬಳಸಿಕೊಳ್ಳಲು ತುಮಕೂರು ವಿಶ್ವವಿದ್ಯಾಲಯ ನಿಧರಿಸಿದೆ.
ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿರುವ ತುಮಕೂರು ವಿವಿ ರಿಜಿಸ್ಟ್ರಾರ್ ನಹಿದಾ, ಶಿಷ್ಯವೇತನ ಪಡೆಯುತ್ತಿರುವ ಸಂಶೋಧನಾ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಂತೆ ಸೂಚಿಸಿದ್ದಾರೆ. ಯುಜಿಸಿ ನಿಯಮಾನುಸಾರ ತುಮಕೂರು ವಿವಿ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಿಂದ ಆತಂಕಕ್ಕೊಳಗಾಗಿರುವ 150 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಸುತ್ತೋಲೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
