ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗಾಗಿ ಬರೆದಿದ್ದ ಸಿಇಟಿ ಪರೀಕ್ಷಾ ಫಲಿತಾಂಶವನ್ನು ನಾಳೆ ಬೆಳ್ಳಿಗ್ಗೆ 11ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಕ ನಿರ್ದೇಶಕಿ ಎಸ್.ರಮ್ಯಾ ಅವರು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಿಗ್ಗೆ 11ಗಂಟೆಯ ನಂತರ ಕೆಇಎ ವೆಬ್‌ಸೈಟ್ ಸಿಇಟಿ ಫಲಿತಾಂಶ ಸಿಗಲಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಸಿಇಟಿ ಫಲಿತಾಂಶ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಎರಡನ್ನೂ ಆಧರಿಸಿ ರ‍್ಯಾಂಕ್ ಪಟ್ಟಿ ಸಿದ್ಧಪಡಿಸಲಾಗಿದೆ.
