ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿರುವ 5ಗ್ಯಾಂರಟಿಗಳನ್ನು ಒಂದೊಂದಾಗಿ ಈಡೇರಿಸುತ್ತಾ ಬಂದಿದ್ದು, ನಿನ್ನೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದೀಗ ಮಹಿಳೆಯರಿಗೆ ಸರ್ಕಾರ ಬಸ್ ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಿದೆ. ಈ ಹಿನ್ನೆಲೆ ಬಸ್ ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಪುರುಷ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿದೆ.
ಹೌದು, ಇಂದು ಬೆಳ್ಳಂಬೆಳಿಗ್ಗೆ ಬಿಎಂಟಿಸಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದರಿಂದ ಪುರುಷರು ಬಾಗಿಲಿನಲ್ಲಿಯೇ ನಿಂತು ಪ್ರಯಾಣಿಸುವಂತಾಗಿದೆ. ಈ ಹಿನ್ನೆಲೆ ಹಣ ಕೊಟ್ರು ನಾವು ನಿಂತುಕೊಂಡು ಹೋಗಬೇಕಾಗಿದೆ. ಹೀಗಾಗಿ ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಬೇಕೆಂದು ಪುರುಷ ಪ್ರಯಾಣಿಕರು ಆಗ್ರಹಿಸಿದ್ದಾರೆ.
