Home ಕ್ರೀಡೆ ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ ತಂಡ

ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ ತಂಡ

ಮೊಹಾಲಿ: ಇಲ್ಲಿನ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐ ಎಸ್ ಬಿಂದ್ರ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ಈಗಾಗಲೇ ಚಾಲನೆ ದೊರೆತಿದ್ದು, ಆಸ್ಟ್ರೇಲಿಯಾ ಎದುರು ಟಾಸ್‌ ಗೆದ್ದಿರುವ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಸದ್ಯದಲ್ಲೇ ವಿಶ್ವಕಪ್‌ ಆರಂಭವಾಗುವ ಹಿನ್ನೆಲೆ ಈ ಪಂದ್ಯ ಉಭಯ ತಂಡಗಳಿಗೆ ಬಹಳ ಮಹತ್ವದ ಪಂದ್ಯವಾಗಿದೆ. ಸರಣಿಯ ಮೊದಲೆರಡು ಪಂದ್ಯಗಳಿಗೆ ರೋಹಿತ್‌ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಾಗಿ ಕೆ.ಎಲ್‌ ರಾಹುಲ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಇನ್ನು, ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಮೊದಲ ಏಕದಿನ ಪಂದ್ಯ ಸ್ಪೋರ್ಟ್ಸ್ 18 ನಲ್ಲಿ ಇಂಗ್ಲೀಷ್‌ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಭಾರತ ತಂಡದಲ್ಲಿ ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ಸೂರ್ಯಕುಮಾರ್ ಯಾದವ್,  ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಕ್ರಿಕೆಟ್‌ ಆಡಲಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಯಡಮ್ ಝಂಪಾ ಆಡಲಿದ್ದಾರೆ.

 
Previous articleಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ದಿನಕ್ಕೊಂದು ಹೊಸ ತಿರುವು: ಗೋವಿಂದ ಬಾಬು ಆಪ್ತನಿಗೆ ಸಿಸಿಬಿ ಬುಲಾವ್
Next articleತಮಿಳು ನಾಡಿಗೆ ನೀರು ಹರಿಸಲು ಸುಪ್ರೀಂ ಆದೇಶ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ