
ಮೈಸೂರು: ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಂ.ಪ.ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ಮೌಲಿಕ ಕೃತಿಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ.
‘ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಮೂಲತಃ ಗೌರಿಬಿದನೂರು ತಾಲೂಕಿನ ಹಂಪಸಂದ್ರದವರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ನಂತರ ಮಂಡ್ಯ, ದಾವಣಗೆರೆ, ಶಿವಮೊಗ್ಗ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸಿದರು.
ಮೈಸೂರು ದಸರಾ ಮಹೋತ್ಸವ ಯಾವಾಗ?: 2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ.
