Home ಸುದ್ದಿಗಳು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ವಂಚನೆ ಪ್ರಕರಣ: ಆರೋಪಿಯ ಬಂಧನ

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ವಂಚನೆ ಪ್ರಕರಣ: ಆರೋಪಿಯ ಬಂಧನ

89 lakhs by threatening to digitally arrest

ಉಡುಪಿ: ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಅವರಿಂದ 89‌ ಲಕ್ಷ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಎಂದು ಗುರುತಿಸಲಾಗಿದೆ.

ಬಂಧಿತನಿಂದ ಒಂದು ಮೊಬೈಲ್ ಫೋನ್ ಹಾಗೂ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆ ಏನು: ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರಾದ ಸಂತೋಷ್ ಕುಮಾರ್‌ಗೆ ಸೆ.11ರಂದು ಅಪರಿಚಿತರು ಕರೆ ಮಾಡಿ, ಅಕ್ರಮ ಜಾಹೀರಾತು, ಸಂದೇಶ ಕಳುಹಿಸುವುದಕ್ಕೆ ನಿಮ್ಮ ಮೇಲೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ನಿಮ್ಮ ಮೇಲೆ ಅರೆಸ್ಟ್ ವಾರಂಟ್ ಆಗಿರುವುದಾಗಿ ಬೆದರಿಸಿದರು.

ನಂತರ ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿ ವಾಟ್ಸಪ್ ವಿಡಿಯೋ ಕರೆ ಮಾಡಿ, ಮನಿ ಲಾಂಡ್ರಿಂಗ್ ಕೇಸ್‌ನಲ್ಲಿ ಭಾಗಿಯಾಗಿರುವುದಾಗಿ ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿ, ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದ್ದರು.

ಅದರಂತೆ ಸಂತೋಷ್ ಕುಮಾರ್‌ ಎಂಬವರನ್ನು ಬೆದರಿಸಿ ಅವರಿಂದ 89,00,000ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿ ಕೊಂಡು ವಂಚನೆ ಎಸಗಿದ್ದರು. ಈ ಬಗ್ಗೆ ಸಂತೋಷ ಕುಮಾರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಕೇರಳ ರಾಜ್ಯ ಮತ್ತು ಮಹಾರಾಷ್ಟ ರಾಜ್ಯದ ಪುಣೆ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಕಿರಣ್‌ನನ್ನು ಧಾರವಾಡದಲ್ಲಿ ಬಂಧಿಸಿದ್ದಾರೆ.

 
Previous articleಇಂದು ವಸಂತ ಪಂಚಮಿ: ತ್ರಿವೇಣಿ ಸಂಗಮದಲ್ಲಿ ಮೂರನೇ ಅಮೃತ ಪುಣ್ಯಸ್ನಾನ
Next articleಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ: ಪ್ರಕರಣ ದಾಖಲು