Home ಸುದ್ದಿಗಳು ಖಾಸಗಿ ಬಸ್  ಹಾಗೂ ಕಾರು ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಖಾಸಗಿ ಬಸ್  ಹಾಗೂ ಕಾರು ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

0
ಖಾಸಗಿ ಬಸ್  ಹಾಗೂ ಕಾರು ನಡುವೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ಖಾಸಗಿ ಬಸ್  ಹಾಗೂ ಕಾರು ನಡುವೆ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದ್ದು, ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿದ್ದ ಸಂದರ್ಭ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

LEAVE A REPLY

Please enter your comment!
Please enter your name here