ವಿಟ್ಲ: ಎರಡು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕಳ್ಳರನ್ನು ವಿಟ್ಲ ಪೊಲೀಸರು ಬಂಧಿಸಿದ ಘಟನೆ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ಧರ್ಮನಗರ ನಿವಾಸಿ ಮಹಮ್ಮದ್ ರಿಯಾಜ್(38) ಮತ್ತು ಉಳ್ಳಾಲ ತಾಲೂಕು ಹಳೆ ಕೋಟೆ ಮನೆ ನಿವಾಸಿ ಮೊಹಮ್ಮದ್ ಇಂತಿಯಾಜ್(38)ಎಂದು ಗುರುತಿಸಲಾಗಿದೆ.
ಮಿತ್ತೂರು, ಕೊಡಾಜೆ ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವುಗೈದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ.
ಆರೋಪಿ ಮಹಮ್ಮದ್ ರಿಯಾಜ್ ಮೇಲೆ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ.
ಬಂಧಿತರಿಂದ ರೂ 1,35,000 ರೂ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಒಂದು ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
