ರಾಯಚೂರು: ಸಿಎಂ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ ನಡೆದಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಕುತಂತ್ರಕ್ಕೆ ಬೇಸರಗೊಂಡು ನ್ಯಾಯಬದ್ಧವಾಗಿ ಪಡೆದಿರುವ ಸೈಟ್ಗಳನ್ನು ಸಿಎಂ ಪತ್ನಿ ವಾಪಸ್ ಕೊಟ್ಟಿದ್ದಾರೆ ಅವರ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ.
ಬಿಜೆಪಿಯವರಿಗೆ ನ್ಯಾಯ, ಅಭಿವೃದ್ಧಿ ಬೇಕಿಲ್ಲ. ಕೇವಲ ಕುತಂತ್ರ ರಾಜಕೀಯ ಮಾತ್ರ ಬೇಕು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಕೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
