Home ಸುದ್ದಿಗಳು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಆರೋಪ: ಬಾಂಗ್ಲಾದೇಶದ ನೀಲಿ ಚಿತ್ರತಾರೆಯ ಬಂಧನ

ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಆರೋಪ: ಬಾಂಗ್ಲಾದೇಶದ ನೀಲಿ ಚಿತ್ರತಾರೆಯ ಬಂಧನ

0
ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಆರೋಪ: ಬಾಂಗ್ಲಾದೇಶದ ನೀಲಿ ಚಿತ್ರತಾರೆಯ ಬಂಧನ

ಮಹಾರಾಷ್ಟ್ರ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಿತ್ರತಾರೆ ರಿಯಾ ಬಾರ್ಡೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ ನೆಲೆಸಿದ್ದಳು ಎಂದು ತಿಳಿದು ಬಂದಿದೆ.

ಆಕೆಯ ಕುಟುಂಬದ ಸದಸ್ಯರನ್ನು ಅಂಜಲಿ ಬರ್ಡೆ ಅಲಿಯಾಸ್ ರೂಬಿ ಶೇಖ್ (ತಾಯಿ), ಅರವಿಂದ್ ಬಾರ್ಡೆ (ತಂದೆ), ರವೀಂದ್ರ ಅಲಿಯಾಸ್ ರಿಯಾಜ್ ಶೇಖ್ (ಸಹೋದರ), ಮತ್ತು ರಿತು ಅಲಿಯಾಸ್ ಮೋನಿ ಶೇಖ್ (ಸಹೋದರಿ) ಎಂದು ಗುರುತಿಸಲಾಗಿದೆ.

ರಿಯಾ ಬಾರ್ಡೆ ಅವರ ತಾಯಿ ಮೂಲತಃ ಬಾಂಗ್ಲಾದೇಶದವರು ಆದರೆ ಮಹಾರಾಷ್ಟ್ರದ ಅಮರಾವತಿಗೆ ಸೇರಿದ ಅರವಿಂದ ಬಾರ್ಡೆ (ರಿಯಾಳ ತಂದೆ) ಅವರನ್ನು ವಿವಾಹವಾಗಿದ್ದರು. ಇದಾದ ನಂತರ ಆಕೆ ತನ್ನ ರಾಷ್ಟ್ರೀಯತೆಯನ್ನು ಭಾರತೀಯ ಎಂದು ಸಾಬೀತುಪಡಿಸಲು ನಕಲಿ ದಾಖಲೆಗಳನ್ನು ನೀಡಿದ್ದಳು.

ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಬರ್ಡೆ ಅವರನ್ನು ಈ ಹಿಂದೆಯೂ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 420, 465, 468, 479, 34, ಮತ್ತು 14A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

LEAVE A REPLY

Please enter your comment!
Please enter your name here