Home ಸುದ್ದಿಗಳು ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ

0
ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಉಡುಪಿ: ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.

ಬಂಧಿತರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂದು ಗುರುತಿಸಲಾಗಿದೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಇವರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ.

ಈ ಏಳು ಮಂದಿ ಕಳೆದ ಮೂರು ವರ್ಷಗಳಿಂದ ಮಲ್ಪೆಯಲ್ಲಿ ವಾಸಿಸುತ್ತಿದ್ದರು. ಇವರಲ್ಲಿ ಉಸ್ಮಾನ್ ಎಂಬಾತ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು.

ಬಂಧನಕ್ಕೆ ಒಳಗಾಗಿರುವ ಮಾಣಿಕ್‌ ಹುಸೈನ್‌ ನಕಲಿ ಪಾಸ್‌ಪೋರ್ಟ್‌ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ.

ವಿಮಾನ‌ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಎಲ್ಲ ವಿಷಯ ಪೊಲೀಸರಿಗೆ ತಿಳಿಸಿದ್ದಾನೆ. ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here