
ಬೆಳಗಾವಿ: ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ವಿವಾದಿತ ಹೇಳಿಕೆ ನೀಡಿದ್ದಾರೆ.
ಚಳಿಗಾಲದ ಅಧಿವೇಶನ ಆರಂಭಗೊಳ್ಳುವ ಸಂದರ್ಭದಲ್ಲೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಗಡಿ ವಿವಾದವನ್ನು ಕೆದಕಿದ್ದಾರೆ.
ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ.
