Home ಸುದ್ದಿಗಳು ಬಿಜೆಪಿಯವರು ವಿಷಯ ಇಲ್ಲದೇ ಇದ್ದರೂ ವಿವಾದ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ವಿಷಯ ಇಲ್ಲದೇ ಇದ್ದರೂ ವಿವಾದ ಮಾಡುತ್ತಾರೆ: ಸಿಎಂ ಸಿದ್ದರಾಮಯ್ಯ

Micro Finance Bill enacted by Ordinance

ಬೆಂಗಳೂರು: ಬಿಜೆಪಿಯವರು ವಕ್ಫ್ ವಿವಾದದ ವಿಚಾರವಾಗಿ ರಾಜಕೀಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ನ.4 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯಕೋಸ್ಕರ ಪ್ರತಿಭಟನೆಮಾಡುತ್ತಿದ್ದಾರೆ. ಮೂರು ಉಪಚುನಾವಣೆ ಮತ್ತು ಮಹಾರಾಷ್ಟ್ರ ಚುನಾವಣೆ ಇದೆಯಲ್ಲ ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ಇದೆಲ್ಲಾ ರಾಜಕೀಯ ಮಾಡುವ ಕಾರಣಕ್ಕಾಗಿ ಮಾಡುತ್ತಾರೆ ಎಂದರು.

ಬಿಜೆಪಿ ಕಾಲದಲ್ಲಿಯೇ ನೋಟಸ್ ಕೊಡುವುದಕ್ಕೆ ಪ್ರಾರಂಭ ಆಗಿದ್ದು. ನಾನು ಈಗಾಗಲೇ ಎಲ್ಲಾ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದೇನೆ. ಯಾರನ್ನು ಒಕ್ಕಲೆಬ್ಬಿಸುವುದಿಲ್ಲ. ಇದರಲ್ಲಿ ಇನ್ನೇನು ವಿವಾದವಿಲ್ಲ. ಯಾವುದೇ ಜಿಲ್ಲೆಯಲ್ಲಿ ನೋಟಿಸ್ ಕೊಟ್ಟಿದ್ದರೂ ಅದನ್ನು ವಾಪಸ್ ಪಡೆಯುತ್ತೇವೆ ಎಂದರು.

ಬಿಜೆಪಿಯವರು ಯಾವತ್ತು ಸತ್ಯ ಹೇಳುವುದಿಲ್ಲ. ಬರೀ ಸುಳ್ಳನ್ನೇ ಹೇಳುತ್ತಾರೆ. ವಿಷಯ ಇಲ್ಲದೇ ಇದ್ದರೂ ವಿವಾದ ಮಾಡುತ್ತಾರೆ. ಮುಡಾದಲ್ಲಿ ವಿವಾದ ಇರಲಿಲ್ಲ. ಆದರೂ ಬಿಜೆಪಿಯವರು ಅದನ್ನು ವಿವಾದವನ್ನಾಗಿ ಮಾಡಿದರು. ಅದೇ ಅವರ ಗುಣ ಎಂದು ವಾಗ್ದಾಳಿ ನಡೆಸಿದರು.

 
Previous articleಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ: ಎರಡು ಎಲೆಕ್ಟ್ರಿಕ್‌ ವಾಹನಗಳು ಭಸ್ಮ
Next articleಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಕಳ್ಳರಿಬ್ಬರ ಬಂಧನ