Home ಸುದ್ದಿಗಳು ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆ ಭರ್ಜರಿ ಗೆಲುವು

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆ ಭರ್ಜರಿ ಗೆಲುವು

0
ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆ ಭರ್ಜರಿ ಗೆಲುವು

ಮಂಗಳೂರು: ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕೊನೆಗೊಂಡಿದ್ದು ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು. ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದೆ.

ಒಟ್ಟು 5907ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದರೆ, ಎಸ್ ಡಿಪಿಐ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ 90 ಮತಗಳು ಅಮಾನ್ಯಗೊಂಡಿವೆ.

 

LEAVE A REPLY

Please enter your comment!
Please enter your name here