
ಮಂಗಳೂರು: ಸ್ಟೇಟ್ ಬ್ಯಾಂಕ್ ನ ಇಂದಿರಾ ಕ್ಯಾಂಟೀನ್ ಬಳಿ ಶವವೊಂದು ಪತ್ತೆಯಾದ ಘಟನೆ ನಡೆದಿದೆ.
ಖಾಸಗಿ ಬಸ್ ನಿರ್ವಾಹಕ ರಾಜೇಶ್ (30) ಶವ ಎಂದು ಗುರುತಿಸಲಾಗಿದೆ.
ರಾಜೇಶ್ ಮಂಗಳೂರು – ವಿಟ್ಲ ನಡುವೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದರು.
ರಾಜೇಶ್ ಸರಳ ಸ್ವಭಾವದವರಾಗಿದ್ದು, ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುತ್ತಿದ್ದರೆಂದು ಸಹೋದ್ಯೋಗಿ ಮಿತ್ರರು ತಿಳಿಸಿದ್ದಾರೆ.
ಅವರನ್ನು ಕೊಲೆ ಮಾಡಿರುವ ಶಂಕೆ ಮೂಡಿದ್ದು, ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
