Home ಸುದ್ದಿಗಳು ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ,ದಂಡ

ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ,ದಂಡ

Case of caste abuse and assault: Accused sentenced to jail, fined

ಉಡುಪಿ: ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಕಂಚಿನಡ್ಕದ ಅಶ್ರಫ್ ಎಂದು ಗುರುತಿಸಲಾಗಿದೆ.

2016ರ ಫೆ.28ರಂದು ಉಡುಪಿ ತಾಲೂಕಿನ ನಡ್ಸಾಲು ಗ್ರಾಮದ ಕಂಚಿನಡ್ಕದ ನಿವಾಸಿ ಪರಿಶಿಷ್ಟ ಜಾತಿಗೆ ಸೇರಿದ ಗೋವಿಂದ ಎಂಬವರಿಗೆ ಆರೋಪಿ ಕ್ಷುಲ್ಲಕ ವಿಚಾರಕ್ಕೆ ಜಾತಿ ನಿಂದನೆ ಮಾಡಿ ಕಬ್ಬಿಣದ ಪಂಚ್‌ನಿಂದ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ದೂರಲಾಗಿತ್ತು.

ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣವರ್, ಆರೋಪಿತನು ತಪ್ಪಿತಸ್ಥ ಎಂದು ತಿರ್ಮಾನಿಸಿ ಕಲಂ 324ರ ಅಪರಾಧಕ್ಕೆ 1 ವರ್ಷ ಸಾದ ಶಿಕ್ಷೆ ಮತ್ತು ಕಲಂ 504 ರಡಿಯ ಅಪರಾಧಕ್ಕೆ 3 ತಿಂಗಳ ಸಾದಾ ಶಿಕ್ಷೆ ಮತ್ತು ಕಲಂ 506 ರಡಿಯ ಅಪರಾಧಕ್ಕೆ 6 ತಿಂಗಳ ಸಾದಾ ಶಿಕ್ಷೆ ಮತ್ತು ಒಟ್ಟು 20ಸಾವಿರ ರೂ. ದಂಡ, ಎಸ್.ಸಿ/ಎಸ್.ಟಿ ಕಾಯ್ದೆ ಕಲಂ 3(1)(ಆರ್)(ಎಸ್) ರಡಿಯ ಅಪರಾಧಕ್ಕೆ 1 ವರ್ಷ ಸಾದಾ ಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿ ಆದೇಶ ನೀಡಿದರು.

ಆರೋಪಿಯಿಂದ ವಸೂಲಾದ ದಂಡದ ಮೊತ್ತದ ಪೈಕಿ 20,000ರೂ. ವನ್ನು ದೂರುದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

 
Previous articleಮಹಿಳೆಯನ್ನು ಕೊಂದಿದ್ದ ನರಭಕ್ಷಕ ಹುಲಿಯ ಶವ ಪತ್ತೆ: ಹುಲಿ ಹೊಟ್ಟೆಯಲ್ಲಿತ್ತು ಕೂದಲು, ಬಟ್ಟೆ, ಕಿವಿಯೋಲೆ
Next article2025ರ ’ರಂಗಭೂಮಿ ಪ್ರಶಸ್ತಿ’ಗೆ ಹಿರಿಯ ಕಲಾವಿದ ಡಾ.ಭಾಸ್ಕರಾನಂದಕುಮಾರ್ ಆಯ್ಕೆ