Home ಸುದ್ದಿಗಳು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

0
ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದ ತನಿಖೆಗೆ ಸಿಬಿಐ ರಾಜ್ಯ ಪ್ರವೇಶಕ್ಕೆ ಕರ್ನಾಟಕ ಸರ್ಕಾರದಿಂದ ನಿರ್ಬಂಧ ಮಾಡಿರುವ ವಿಚಾರಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‌ನಲ್ಲಿ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ?.

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಬರೆದುಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here