Home ಸುದ್ದಿಗಳು ಜನರ ಕಷ್ಟ ಸಿಎಂ ಅವರಿಗೆ ಅರ್ಥ ಆಗುತ್ತಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

ಜನರ ಕಷ್ಟ ಸಿಎಂ ಅವರಿಗೆ ಅರ್ಥ ಆಗುತ್ತಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

0
ಜನರ ಕಷ್ಟ ಸಿಎಂ ಅವರಿಗೆ ಅರ್ಥ ಆಗುತ್ತಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸ್ಲಮ್‌ನಲ್ಲಿ ವಾಸಿಸಲು ಆಗದ ಜಾಗದಲ್ಲಿ ಜನರು ವಾಸವಾಗಿದ್ದಾರೆ. ಅಂಥವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಅವರು ತೆರಿಗೆ ಕಟ್ಟುವವರು ಎಂದು ಹೇಳುತ್ತಾರೆ. ಅವರೆಲ್ಲ ತೆರಿಗೆ ಕಟ್ಟುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕೇಳಿದ್ದಾರೆ.

ರೇಷನ್ ಕಾರ್ಡ್ ರದ್ದಾಗಿರುವ  ಮನೆಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ. ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷಧಿ, ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತಗೊಳ್ಳುತ್ತವೆ. ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ ಎಂದರು.

ಮುಡಾ ಎಂದು ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಇದೇನು ಮುಖ್ಯಮಂತ್ರಿಗಳೆ? ಇದು ಅತ್ಯಂತ ಜನ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ರೇಷನ್ ಕಾರ್ಡ್ ರದ್ದಾದವರು ಅರ್ಜಿ ಹಾಕಿದರೆ ತಕ್ಷಣ ವಾಪಸ್ ಕೊಡಲಾಗುವುದು ಎಂದು ಹೇಳುತ್ತಾರೆ. ಅರ್ಜಿ ಹಾಕಿದ ಮೇಲೆ ಕಾರ್ಡ್ ಬರುವುದು ಯಾವಾಗ? ಅಲ್ಲಿಯ ತನಕ ಕಾರ್ಡ್ ರದ್ದಾಗಿರುವ ಬಡವರು ಏನು ತಿನ್ನಬೇಕು ಎಂದು ಕಿಡಿಕಾರಿದರು.

 

LEAVE A REPLY

Please enter your comment!
Please enter your name here