Home ಸುದ್ದಿಗಳು ಈ ಗಲಭೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ: ಸಿಎಂ ಸಿದ್ದರಾಮಯ್ಯ

ಈ ಗಲಭೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ: ಸಿಎಂ ಸಿದ್ದರಾಮಯ್ಯ

After the Muda scam, another problem for the CM: Arkavati settlers complain to the Governor

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ  ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಗಲಭೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

ಸಾರ್ವಜನಿಕರು ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

 
Previous articleಉಚಿತ ಬೋರ್‌ವೆಲ್‌ ಕೊರೆಸಲು ಸರ್ಕಾರದಿಂದ ಸಹಾಯಧನ: ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವಾಗ..?
Next articleಮದ್ಯ ನೀತಿ ಪ್ರಕರಣ: ನಾಳೆ ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು