
ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆಯ ಏರಿಕೆಯ ನಾಗಾಲೋಟ ಮುಂದುವರಿದಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಕಳೆದ ಮೂರು ದಿನಕ್ಕೆ ಹೋಲಿಸಿದರೆ ಗುರುವಾರ ಗ್ರಾಮ್ಗೆ ಒಂದು ರೂನಷ್ಟು ಮಾತ್ರ ಬೆಲೆ ಏರಿಕೆ ಆಗಿದೆ.
ಭಾರತದಲ್ಲಿ ಬೆಳ್ಳಿ ಬೆಲೆಯೂ ಏರಿಳಿತ ಕಂಡಿದೆ. ಮುಂಬೈ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಚೆನ್ನೈ ಮೊದಲಾದ ಕೆಲವೆಡೆ 10 ಪೈಸೆ ಏರಿಕೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 70,610 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,030 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,270 ರೂಪಾಯಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ): ಬೆಂಗಳೂರು: 70,610 ರೂ, ಚೆನ್ನೈ: 70,610 ರೂ, ಮುಂಬೈ: 70,610 ರೂ, ದೆಹಲಿ: 70,760 ರೂ, ಕೋಲ್ಕತಾ: 70,610 ರೂ, ಕೇರಳ: 70,610 ರೂ, ಅಹ್ಮದಾಬಾದ್: 70,660 ರೂ, ಜೈಪುರ್: 70,760 ರೂ,ಲಕ್ನೋ: 70,760 ರೂ, ಭುವನೇಶ್ವರ್: 70,610 ರೂ ಆಗಿದೆ.
