Home ಸುದ್ದಿಗಳು ಕುಂದಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯ ಬಂಧನ

ಕುಂದಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯ ಬಂಧನ

0
ಕುಂದಾಪುರ: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಯ ಬಂಧನ

ಕುಂದಾಪುರ: ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಕುಂದಾಪುರ ಗುಲ್ವಾಡಿಯ ಉದಯನಗರದ ಮನೆಯೊಂದರಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್‌ (40) ಹಾಗೂ ಆತನ ಪತ್ನಿ ಫಾತಿಮಾ (33) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಮನೆಯಲ್ಲಿದ್ದ 6.43 ಲಕ್ಷ ರೂ. ಮೌಲ್ಯದ 5 ಪ್ರತ್ಯೇಕ ಪ್ಯಾಕೆಟ್‌ಗಳಲ್ಲಿ ತುಂಬಿಸಿಟ್ಟಿದ್ದ 8.37 ಕೆ.ಜಿ. ಗಾಂಜಾವನ್ನು ಹಾಗೂ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಳಸುತ್ತಿದ್ದ ಮೊಬೈಲ್‌ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here