
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯ ಭಾರತದಲ್ಲೂ ಬೆಲೆ ಇಳಿಕೆಯಾಗುವ ಸಾಧ್ಯತೆ ಕಂಡುಬಂದಿದೆ.
ತೈಲ ಬೆಲೆ ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು ಎಂದು ಹೇಳಲಾಗುತ್ತಿದೆ.
ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಆಗಸ್ಟ್ನಲ್ಲಿ ಸ್ಥಿರವಾಗಿದ್ದರೆ ಖಾಸಗಿ ಉದ್ಯೋಗಗಳ ಬೆಳವಣಿಗೆ ದರ ನಿಧಾನವಾಗುತ್ತಿದ್ದು ಉದ್ಯೋಗ ಕಡಿತ ಆರಂಭವಾಗಿದೆ. ಇದರ ನೇರ ಪರಿಣಾಮ ತೈಲ ಮಾರುಕಟ್ಟೆ ಮತ್ತು ಸ್ಟಾಕ್ ಮಾರುಕಟ್ಟೆಯ ಮೇಲೆ ಬೀಳುತ್ತಿದೆ.
