Home ಸುದ್ದಿಗಳು ಹೆಣ್ಣು ಮಗುವನ್ನು ಬರಮಾಡಿಕೊಂಡ ಡಾರ್ಲಿಂಗ್ ಕೃಷ್ಣ ದಂಪತಿ

ಹೆಣ್ಣು ಮಗುವನ್ನು ಬರಮಾಡಿಕೊಂಡ ಡಾರ್ಲಿಂಗ್ ಕೃಷ್ಣ ದಂಪತಿ

Darling Krishna couple

ಸ್ಯಾಂಡಲ್ ವುಡ್ ನ ಬೆಸ್ಟ್ ಜೋಡಿ ಎಂದೇ ಖ್ಯಾತಿ ಪಡೆದ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಜೋಡಿ ಸಂತಸದ ಸುದ್ದಿಯೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ನಲ್ಲಿ ಹಂಚಿಕೊಂಡಿದ್ದಾರೆ.

ಹೌದು ಲವ್‌ಮಾಕ್ಟೇಲ್ ಖ್ಯಾತಿಯ ಈ ಜೋಡಿ ತಮ್ಮ ಕುಟುಂಬಕ್ಕೆ ಹೆಣ್ಣು ಮಗುವನ್ನು ಬರಮಾಡಿಕೊಂಡಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ ಎಂದು ಡಾರ್ಲಿಂಗ್ ಕೃಷ್ಣ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ.

ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

 
Previous articleತೆಲಂಗಾಣ: ಪೊಲೀಸ್ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಸಾವು
Next articleಕೆಎಸ್​ಆರ್​ಟಿಸಿ ಬಸ್, ಶಾಲಾ ಬಸ್​ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು