Home ಸುದ್ದಿಗಳು ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿನ ಸಜೆ

ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿನ ಸಜೆ

0
ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿಗೆ 20 ವರ್ಷ ಕಠಿನ ಸಜೆ

ಕುಂದಾಪುರ: ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿನ ಸಜೆ ನೀಡಿದೆ.

ಆರೋಪಿಯನ್ನು ಮಿಥುನ್‌ (21) ಎಂದು ಗುರುತಿಸಲಾಗಿದೆ.

17ರ ಹರೆಯದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿ ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಸ್ವಲ್ಪ ಸಮಯದ ನಂತರ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿತ್ತು.

ನಂತರ ಆಕೆಯ ತಂದೆ ನೀಡಿದ್ದ ದೂರಿನ ಮೇಲೆ ಕುಂದಾಪುರ ಇನ್‌ಸ್ಪೆಕ್ಟರ್‌ ನಂದಕುಮಾರ್‌ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳನ್ನು ವಿಚಾರಿಸಿ, ವಾದ ಆಲಿಸಿ, ಡಿಎನ್‌ಎ ಸಾಕ್ಷ್ಯವನ್ನು ಪರಿಗಣಿಸಿ ಆರೋಪಿ ದೋಷಿ ಎಂದು ತೀರ್ಪು ನೀಡಿದೆ.

ಅಪರಾಧಿಗೆ 20 ವರ್ಷಗಳ ಸಜೆ, 21 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 15 ಸಾವಿರ ರೂ. ಬಾಲಕಿಗೆ, 6 ಸಾವಿರ ರೂ. ಸರಕಾರಕ್ಕೆ ಸಲ್ಲಿಸುವಂತೆಯೂ ನೊಂದ ಬಾಲಕಿಗೆ ಸರಕಾರದಿಂದ 2 ಲಕ್ಷ ರೂ. ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.

 

LEAVE A REPLY

Please enter your comment!
Please enter your name here