Home ಸುದ್ದಿಗಳು ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲನ ನಿವಾಸದ ಮೇಲೆ ಇಡಿ ದಾಳಿ

ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲನ ನಿವಾಸದ ಮೇಲೆ ಇಡಿ ದಾಳಿ

0
ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲನ ನಿವಾಸದ ಮೇಲೆ ಇಡಿ ದಾಳಿ

ಕೋಲ್ಕತ್ತಾ: ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌  ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ದಾಳಿ ನಡೆಸಿದೆ.

ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇತ್ತೀಚೆಗಷ್ಟೇ ಸಂದೀಪ್‌ ಘೋಷ್‌ ಅವರನ್ನ ಸಿಬಿಐ ಬಂಧಿಸಿತ್ತು.

ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು.

ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು. ಬೆನ್ನಲ್ಲೇ ಸಂದೀಪ್‌ ಘೋಷ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಸಂದೀಪ್‌ ಘೋಷ್‌ ಮನೆ ಮಾತ್ರವಲ್ಲದೇ ಅವರ ನಿಕಟವರ್ತಿಗಳ ಮನೆ ಮೇಲೂ ದಾಳಿ ನಡೆಯುತ್ತಿದೆ. ಕೋಲ್ಕತ್ತಾ  ಮತ್ತು ಹೌರಾದ ಒಟ್ಟು 7 ಕಡೆಗಳಲ್ಲಿ ಇಡಿ ತಂಡ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ

 

LEAVE A REPLY

Please enter your comment!
Please enter your name here