
ಬೆಂಗಳೂರು: ಮುಡಾ ಹಗರಣದ ಅವ್ಯವಹಾರ ಆರೋಪದ ಮೇಲೆ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರ ಮೇಲೆ ಎಫ್ಐಆರ್ ದಾಖಲಿಸುತ್ತಿದ್ದಂತೆ ಇಡಿ ಅಲರ್ಟ್ ಆಗಿದೆ.
ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ.
ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.
ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಆಪ್ತರ ದೂರವಾಣಿ, ಬ್ಯಾಂಕ್ ಖಾತೆ ಸೇರಿದಂತೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ.
ಮುಡಾ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಜೊತೆ ಲೋಕಾಯುಕ್ತ ಟೀಂ ಭೇಟಿ ನೀಡಿದೆ.
