Home ಸುದ್ದಿಗಳು ಛತ್ತೀಸ್‌ಗಢಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಹತ್ತು ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಹತ್ತು ಮಾವೋವಾದಿಗಳ ಎನ್‌ಕೌಂಟರ್‌

0
ಛತ್ತೀಸ್‌ಗಢಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಹತ್ತು ಮಾವೋವಾದಿಗಳ ಎನ್‌ಕೌಂಟರ್‌

ರಾಯ್ಪುರ್: ಛತ್ತೀಸ್‌ಗಢದ ಕೊಂಟಾದ ಭೇಜ್ಜಿ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ನಡೆಸಿದ್ದು, 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ಮೂರು ಸ್ವಯಂಚಾಲಿತ ಬಂದೂಕುಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಕಳೆದ ತಿಂಗಳು ಛತ್ತೀಸ್‌ಗಢದ ನಾರಾಯಣಪುರ-ದಂತೇವಾಡ ಗಡಿಯ ಅರಣ್ಯದಲ್ಲಿ ಭದ್ರತಾ ಪಡೆಗಳು 31 ಮಾವೋವಾದಿಗಳನ್ನು ಹೊಡೆದುರುಳಿಸಿದ್ದರು.

 

LEAVE A REPLY

Please enter your comment!
Please enter your name here