ಮಂಗಳೂರು: ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗೋವಾ ರಾಜ್ಯದ ವಿವಿಧ ಬ್ರ್ಯಾಂಡ್‌ಗಳ ಮದ್ಯವನ್ನು ವಶಪಡಿಸಿಕೊಂಡ ಘಟನೆ ನಗರದ ಗೋರಿಗುಡ್ಡೆ ನೆಹರೂ ರೋಡ್‌ನಲ್ಲಿ ನಡೆದಿದೆ.
ಚಂದ್ರಕಾಂತ್ ಅವರ ಮನೆಯ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯವರು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.ಹಾಗೂ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಅಂದಾಜು 64,500 ರೂ. ಮೌಲ್ಯದ 47.250 ಲೀ. ಮದ್ಯವನ್ನು ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.ಅಬಕಾರಿ ಇಲಾಖೆಯವರು ಮನೆಯ ಮೇಲೆ ದಾಳಿ ನಡೆಸಿ ಮದ್ಯವನ್ನು ವಶಪಡಿಸಿಕೊಂಡಿರುವ ಎರಡನೇ ಪ್ರಕರಣ ಇದಾಗಿದೆ.
