Home ಸುದ್ದಿಗಳು ಬೆಂಗಳೂರಿನಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ: ಬೀದಿಬದಿ ಆಹಾರ ಮಾರಾಟಕ್ಕೆ ನಿಷೇಧ

ಬೆಂಗಳೂರಿನಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ: ಬೀದಿಬದಿ ಆಹಾರ ಮಾರಾಟಕ್ಕೆ ನಿಷೇಧ

0
ಬೆಂಗಳೂರಿನಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ:  ಬೀದಿಬದಿ ಆಹಾರ ಮಾರಾಟಕ್ಕೆ ನಿಷೇಧ

ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,  ತಗ್ಗು ಪ್ರದೇಶ, ಆಸುಪಾಸಿನ ಜಾಗಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಈ ಹಿನ್ನಲೆಯಲ್ಲಿ ಬಿಬಿಎಂಪಿ ಕೆಲ ಮಾರ್ಗಸೂಚಿಯನ್ನು ಹೊರಡಿಸಿದೆ. ಬಿಬಿಎಂಪಿ ಹಾಗೂ ಜಲಮಂಡಳಿ ವತಿಯಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಅದೇಶ ನೀಡಲಾಗಿದೆ.

ಪ್ರವಾಹ ಪರಿಸ್ಥಿತಿಯಿಂದಾಗಿ ಕಾಲರಾ, ಜಾಂಡಿಸ್, ಡೆಂಘೀ, ಕರುಳಬೇನೆ, ಚಿಕನ್ ಗುನ್ಯಾ ಮಲೇರಿಯಾ ರೋಗಗಳ ಆತಂಕ ಎದುರಾಗಿದೆ.

  • ಮಾರ್ಗಸೂಚಿ:
    ಬೆಂಗಳೂರಿನ ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಬಿಸಿ ನೀರು ನೀಡುವುದು ಕಡ್ಡಾಯ.
    – ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು (ಫ್ರೂಟ್ ಬೌಲ್) ಮಾರಾಟ ನಿಷೇಧ.
    – ಆಶಾ ಕಾರ್ತಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಹಾಲೋಜೆನ್ ಮಾತ್ರೆಗಳನ್ನು ನೀಡಬೇಕು.
    – ನೆರೆ ಪೀಡಿತ ಪ್ರದೇಶ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ಅಗತ್ಯ ಔಷಧಿಗಳನ್ನು ಒದಗಿಸಬೇಕು.
    – ಪ್ರತಿ ವಾರ್ಡ್ ಗಳ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್, ಹೆರಿಗೆ ಆಸ್ಪತ್ರೆಗಳಲ್ಲಿ ಔಷಧಿ ಸಿಗುವಂತೆ ಕ್ರಮ.
    – ತುರ್ತು ಪರಿಸ್ಥಿತಿ ನಿಭಾಯಿಸಲು ಪಾಲಿಕೆಯ ಎಲ್ಲಾ ಸಿಬ್ಬಂದಿ ಸನ್ನದ್ಧರಾಗಿರಬೇಕು.
    – ನೀರು ಸಂಗ್ರಹಿಸುವ ಟ್ಯಾಂಕರ್ ಗಳನ್ನು ಶುದ್ಧಗೊಳಿಸಿ ಅಗತ್ಯಕ್ಕೆ ತಕ್ಕಂತೆ ಸಿಗುವಂತೆ ನೋಡಿಕೊಳ್ಳಬೇಕು.
 

LEAVE A REPLY

Please enter your comment!
Please enter your name here