
ಕಾರ್ಕಳ: ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.
ಸರಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್, ಬಸ್ ಟಿಕೆಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದ್ದು, ಬಡವರ ಮತ್ತು ಜನಸಾಮಾನ್ಯರ ರಕ್ತ ಹೀರುತ್ತಿದೆ.
ಇವುಗಳನ್ನೆಲ್ಲ ಪ್ರತಿಭಟಿಸಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಕಟಣೆಯಲ್ಲಿ ತಿಳಿಸಿದೆ.
