
ಅಬುಜಾ: ಉತ್ತರ ನೈಜೀರಿಯಾ ಜಿಗಾವಾ ರಾಜ್ಯದ ಮಜಿಯಾ ಎಂಬ ಹಳ್ಳಿಯಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡ ಘಟನೆ ನಡೆದಿದೆ.
ಈ ಘಟನೆಯಲ್ಲಿ 147 ಜನರು ಸಾವನ್ನಪ್ಪಿದ್ದು, 70 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಜಿಯಾ ಎಂಬ ಹಳ್ಳಿಯಲ್ಲಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ಒಳಚರಂಡಿ ಇಂಧನ ಸೋರಿಕೆಯಾಗುತಿತ್ತು. ಸ್ಥಳೀಯ ನಿವಾಸಿಗಳು ಇಂಧನ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್ ಸ್ಫೋಟಗೊಂಡಿದೆ.
ಸ್ಫೋಟದಿಂದ ಮೃತಪಟ್ಟವರನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ.
ನೈಜೀರಿಯಾದ ಉಪಾಧ್ಯಕ್ಷ ಕಾಶಿಮ್ ಶೆಟ್ಟಿಮಾ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದು,ಈ ವಿಪತ್ತಿನಿಂದ ಪೀಡಿತರಾದ ಕುಟುಂಬಗಳಿಗೆ ಸಹಾಯ ಮಾಡಲು ನಾವು ಎಲ್ಲಾ ಅಗತ್ಯ ಸಂಪನ್ಮೂಲಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
