
ಹೊನ್ನಾವರ: ಕೆಳಗಿನೂರು ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ಗಣಪಯಗೌಡ ಮುಗಳಿಯವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ.
ಕೃಷಿ ಕೂಲಿ ಕೆಲಸದಲ್ಲಿ ತೊಡಗಿಸಿಕೊಂಡ ಇವರು ಸಮಾಜ ಸೇವೆಯ ಜೊತೆಗೆ ವಿವಿಧ ಸಹಕಾರಿ ಸಂಘಗಳಲ್ಲಿ ಸದಸ್ಯರಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಹೊನ್ನಾವರ ತಾಲೂಕಿನ ಗುಣವಂತೆ ಗ್ರಾಮದ ಮುಗಳಿಯ ಬಡ ರೈತ ಕುಟುಂಬದಲ್ಲಿ ಜನಿಸಿದ ಗಣಪಯ್ಯ ಗೌಡರು ಎಂಟನೇ ತರಗತಿವರೆಗೆ ಶಿಕ್ಷಣವನ್ನು ಪಡೆದಿದ್ದಾರೆ. 1983 ರಲ್ಲಿ ಕೆಳಗಿನೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು.
ಇವರ ಆಡಳಿತ ಅವಧಿಯಲ್ಲಿ ಸಂಘದ ಸಾಧನೆಗೆ ಕರ್ನಾಟಕ ಅಪೆಕ್ಸ್ ಬ್ಯಾಂಕ್ 6 ಬಾರಿ ನಗದು ಪ್ರಶಸ್ತಿ, ಕೆಡಿಸಿಸಿ ಬ್ಯಾಂಕ್ 7 ಬಾರಿ ನಗದು ಪ್ರಶಸ್ತಿ ನೀಡಿ ಗೌರವಿಸಿದೆ.
