Home ಸುದ್ದಿಗಳು ದೇಶದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಇಳಿಕೆ: ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ

ದೇಶದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಇಳಿಕೆ: ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ

0
ದೇಶದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಇಳಿಕೆ: ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ

ಬೆಂಗಳೂರು: ಶುಕ್ರವಾರ ಬೆಳಗ್ಗೆ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿರುವುದು ತಿಳಿದುಬಂದಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ತೀವ್ರ ಹೆಚ್ಚಳವಾಗಿದೆ. ಭಾರತದಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಇದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,040 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,140 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,640 ರೂಪಾಯಿ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ): ಬೆಂಗಳೂರು: 67,040 ರೂ, ಚೆನ್ನೈ: 67,040 ರೂ, ಮುಂಬೈ: 67,040 ರೂ, ದೆಹಲಿ: 67,190 ರೂ, ಕೋಲ್ಕತಾ: 67,040 ರೂ, ಕೇರಳ: 67,040 ರೂ, ಅಹ್ಮದಾಬಾದ್: 67,090 ರೂ, ಜೈಪುರ್: 67,190 ರೂ, ಲಕ್ನೋ: 67,190 ರೂ, ಭುವನೇಶ್ವರ್: 67,040 ರೂ ಆಗಿದೆ.

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು.

 

LEAVE A REPLY

Please enter your comment!
Please enter your name here