Home ಸುದ್ದಿಗಳು ಭವ್ಯ ಸಾಂಸ್ಕೃತಿಕ ಮೆರವಣಿಗೆ: ಕಣ್ಮನ ಸೆಳೆದ 30ನೇ ವರ್ಷದ ಆಳ್ವಾಸ್ ವಿರಾಸತ್‌

ಭವ್ಯ ಸಾಂಸ್ಕೃತಿಕ ಮೆರವಣಿಗೆ: ಕಣ್ಮನ ಸೆಳೆದ 30ನೇ ವರ್ಷದ ಆಳ್ವಾಸ್ ವಿರಾಸತ್‌

0
ಭವ್ಯ ಸಾಂಸ್ಕೃತಿಕ ಮೆರವಣಿಗೆ: ಕಣ್ಮನ ಸೆಳೆದ 30ನೇ ವರ್ಷದ ಆಳ್ವಾಸ್ ವಿರಾಸತ್‌

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ ಉದ್ಘಾಟನೆ ನೆರೆದಿದ್ದ ಜನರ ಕಣ್ಮನ ಸೆಳೆದಿದೆ.

ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಸ್ವಾಮೀಜಿ ಹಾಗೂ ಕಟೀಲು ದೇವಳದ ಅನುವಂಶಿಕ ಮೊತ್ತೇಸರ ಲಕ್ಷ್ಮೀನಾರಾಯಣ ಆಸ್ರಣ್ಣ ವೇದಿಕೆಯ ಬಲಭಾಗದಲ್ಲಿದ್ದ ರಥದಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು.

ಸಭಾಂಗಣದಲ್ಲಿ ಸಂಜೆ 6.35ರಿಂದ ರಾತ್ರಿ 8.30ರವರೆಗೆ 150ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳಿಂದ 4000 ಸಾವಿರಕ್ಕೂ ಮಿಕ್ಕಿದ ಕಲಾವಿದರನ್ನು ಒಳಗೊಂಡ ಭವ್ಯ ಸಾಂಸ್ಕೃತಿಕ ಮೆರವಣಿಗೆ ಸಂಪನ್ನಗೊಂಡಿತು.

ದೇಶ-ವಿದೇಶಗಳ ಅದ್ಭುತ ಕಲಾಪರಂಪರೆ, ಶ್ರದ್ಧೆ- ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟತೆಯ ಸಾಂಸ್ಕೃತಿಕ ವೈಭವ, ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಂದಂತೆ ಭಾಸವಾಗಿದೆ.

ರಥಯಾತ್ರೆಯ ಮುಂಭಾಗದಲ್ಲಿ ಮೈಸೂರು, ಪಂಡರಾಪುರ ಹಾಗೂ ಮಂಗಳೂರು ಹರೇಕೃಷ್ಣ ಪಂಥದ ಭಜನಾ ತಂಡಗಳ ಭಜನೆ ಹಾಡಿನ ಮೂಲಕ ಭಕ್ತಿ ಪ್ರಭಾವಳಿ ಮೂಡಿಸಿದರು.

ಹರಿದ್ವಾರದಿಂದ ಬಂದ ವಿಫುಲ್ ವರ್ಮ ನೇತೃತ್ವದ ಗಂಗಾರತಿ ತಂಡ ಮಂತ್ರ ಘೋಷಗಳೊಂದಿಗೆ ಆರತಿ ಬೆಳಗಿದಾಗ ಶ್ರದ್ಧೆ-ಭಕ್ತಿಯ ಪ್ರಜ್ವಲನವಾಯಿತು.

ತಂಖ, ದಾಸಯ್ಯ ಕೊಂಬು, ರಣ ಕಹಳೆ, ಕಹಳೆ, ಕಾಲ ಭೈರವ, ಕೊರಗಡೋಲು, ಸ್ಯಾಕ್ರೋಫೋನ್, ಬ್ಲಾಗ್ ಎನಿಮಲ್, ನಂದಿ ಧ್ವಜ ಸುಗ್ಗಿ ಅಣಿತ ಶ್ರೀರಾಮ ಪರತುರಾಮ, ಘಟೋತ್ಕಜ, ಊರಿನ ಚೆಂಡೆ, ತಟ್ಟಿರಾಯ, ನಾದಸ್ವರ ತಂಡ, ಕೊಡೆಗಳು, ಪೂರ್ಣಕುಂಭ, ರಿಂಗ ವಾವಣಿ ತರುಣಿಯರು, ಅಪ್ಸರೆಯರು, ಯಕ್ಷಗಾನ ವೇಷ ಗೂಳಿ ಮತ್ತು ಕಟ್ಟಪ್ಪ ಗೊರವರ ಕುಣಿತ, ಕಿಂದರಿ ಜೋಗಿ, ಸೋಮನ ಕುಣಿತ, ಆಂಜನೇಯ ಮತ್ತು ವಾನರ ಸೇನೆ, ಮಹಾಕಾಳೇಶ್ವರ, ಶಿವ, ಮರಗಾಲು, ತಮಟೆ ವಾದನ, ಅಂಜನೇಯ, ಮಹಿಳಾ ಪಟ ಕುಣಿತ, ಕಂಬಳ ಚಿತ್ರಣ ಹುಲಿವೇಷ, ತೆಯ್ಯಮ್, ಚಿಟ್ಟೆ ಮೇಳ, ಶಿವ ಮತ್ತು ಅಘೋರಿಗಳು, ಕಿಂಗ್ ಕಾಂಗ್. ಶಿಲ್ಪಾ ಗೊಂಬೆ ಬಳಗ, ಅಳ್ವಾಸ್ ಗೊಂಬೆ ಬಳಗ, ಜೈನೀಸ್ ಹ್ಯಾಗನ್ ಚೈನಾ ಲಯನ್, ಬ್ಯಾಂಡ್ ಸೆಟ್ ಆಳ್ವಾಸ್ ಕಾರ್ಟೂನ್ಸ್, ಸ್ನೇಹ ಗೊಂಬೆ ಬಳಗ, ಚಿಲಿಪಿಲಿ ಬೊಂಬೆ, ವಂಶಿಕಾ ಗೊಂಬೆ ಬಳಗ ಬಿದಿರೆ ಮೂಡುಬಿದಿರೆ ಗೊಂಬೆಗಳು, ಶೆಟ್ಟಿ ಬೊಂಬೆಗಳು, ಶಾರದಾ ಆರ್ಟ್ಸ್ ಗೊಂಬೆ-ಚೆಂಡೆ, ಟಾಲ್ ಮ್ಯಾನ್. ಹಿಮ ಕರಡಿ ಗೊಂಬೆ, ಚಿರತೆ ಗೊಂಬೆ ಏರ್ ಬಲೂನ್ ಬೊಂಬೆ ಕರಡಿ ಗೊಂಬೆ, ಗಜಹುಲಿ, ಕಾಟಿ, ಗಣಪತಿ, ನರಸಿಂಹ, ಹುಲಿ, ಬೋಳಾರ್ ಮತ್ತು ಟೀಮ್ ನರ್ತನ, ವಾರ್ ಕ್ರಾಫ್ಟ್ ಚಿಟ್ರೆ ಸಿಂಗಳೀಕ, ಗಣಪತಿ, ಜೋಡಿ ಸಿಂಹ, ಜೋಡಿ ಜಿಂಕೆ, ಚಿತ್ರದುರ್ಗ ಬ್ಯಾಂಡ್ ಪೂಜಾ ಕುಣಿತ, ಬೇಡರ ಕುಣಿತ, ಮಹಿಳೆಯರ ಕೋಲಾಟ, ಹಗಲು ವೇಷ, ಕೋಳಿಗಳು, ನಾಸಿಕ್ ಬ್ಯಾಂಡ್. ಮೀನುಗಳು, ಕಾರ್ಟೂನ್ಸ್ ಪುರವಂತಿಕೆ, ವೀರಭದ್ರನ ಕುಣಿತ. ಜಗ್ಗಳಿಕೆ ಮೇಳ, ಪಟದ ಕುಣಿತ, ಕೊಂಚಾಡಿ ಚೆಂಡೆ ಶ್ರೀಲಂಕಾ ಕಲಾವಿದರು, ಶ್ರೀಲಂಕಾದ ಮುಖವಾಡ, ವೀರಗಾಸೆ, ಕರಡಿ ಮಜಲು, ಕಂಸಾಳೆ, ಪುರುಷರ ನಗಾರಿ, ಮಹಿಳೆಯರ ನಗಾರಿ, ದಪ್ಪು, ತಿರುವಾದಿರ, ಡೊಳ್ಳು ಕುಣಿತ, ಪಂಚವಾದ್ಯ ಎಂಜೆಲ್ಸ್ ಎಲ್ಕ್ ಸಾಂತಾಕ್ಲಾಸ್, ನಾಸಿಕ್ ಬ್ಯಾಂಡ್. ಶಿಂಗಾರಿ ಮೇಳ, ಅರ್ಧ ನಾರೀಶ್ವರ, ಪೂಕಾವಡಿ, ಕೇರಳದ ಚಿಟ್ರೆ ಕಥಕ್ಕಳಿ ವೇಷ, ಕೇರಳದ ಅರೆನಾ ವೇಷ ಕೇರಳದ ಕಮಲ ವೇಷ, ತಮಿಳುನಾಡಿನ ನೃತ್ಯ ಶೃಂಗಾರಿ ಮೇಳ ಕೇರಳದ ದೇವರ ವೇಷ, ಕೇರಳದ ಡಿಜಿಟಲ್ ವೇಷ, ತೆಯ್ಯಮ್ ಉಡುಪಿ ಬ್ಲೂ ಬ್ರಾಸ್ ಬ್ಯಾಂಡ್ ಕೋಳಿ ಉಡುಪಿ, ಮೀನುಗಳು ಉಡುಪಿ, ಕಾಮಿಡಿಯನ್ಸ್ ಗರುಡ, ದಪ್ಪು, ಕ್ಯಾರಲ್ ಡೊಳ್ಳು ಕುಣಿತ ಸಾಗಿಬಂತು. ಅದರೊಂದಿಗೆ ಎನ್.ಸಿ.ಸಿ-ನೇವಲ್ ಎನ್‌.ಸಿ.ಸಿ ಅಗ್ನಿ ಎನ್.ಸಿ.ಸಿ ಎರ್‌ಪೋರ್ಸ್ ಆಳ್ವಾಸ್ ಬ್ಯಾಂಡ್ ಸೆಟ್ ಪದಸಂಚಲನಕ್ಕೆ ಸಾಥ್ ನೀಡಿದರು.

 

LEAVE A REPLY

Please enter your comment!
Please enter your name here