
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಬಳಿ ಚಿತ್ರನಟ, ಜಾನಪದ ಕಲಾವಿದ ಗುರುರಾಜ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಡಿಕ್ಕಿ ಹೊಡೆದಿದೆ. ಇನ್ನು ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರು ಪ್ರಾಣಾಪಾದಿಂದ ಪಾರಾಗಿದ್ದು, ಯಾರಿಗೂ ಯಾವುದೇ ಗಾಯ ಹಾಗೂ ಪ್ರಾಣಹಾನಿ ಉಂಟಾಗಿಲ್ಲ.
ಗುರುರಾಜ ಹೊಸಕೋಟೆ ಜನಪದ ಗಾಯನ, ರಂಗಭೂಮಿ ಮತ್ತು ಸಿನಿಮಾ ಲೋಕದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದರು. ಜನಪದ ಶೈಲಿಯ ಹಾಡುಗಳ ರಚನೆ ಮತ್ತು ಹಾಡುಗಾರಿಕೆಯಿಂದ ಅಪಾರ ಪ್ರಸಿದ್ಧಿ ಗಳಿಸಿದ್ದಾರೆ.
ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
