
ಬೆಂಗಳೂರು: ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ನಿರಂತರ ಮಳೆಯಾಗಲಿದೆ.
ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಹಾಗೂ ಗಾಳಿ ಬೀಸಲಿದೆ.
