
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಬಿರುಸಾಗಿ ಸಾಗಿದೆ. ಕಳೆದ ವಾರದಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಕೆಲವೆಡೆ ಮನೆಗಳಿಗೆ ನೀರು ಕೂಡ ನುಗ್ಗಿದೆ. ಇದೀಗ ಜುಲೈ 9 ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿದೆ. ಕರಾವಳಿ ಭಾಗದ ಅರಬ್ಬೀ ಸಮುದ್ರದಲ್ಲಿ ವೈಪರಿತ್ಯ ಉಂಟಾಗಿರುವ ಹಿನ್ನಲೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
