Home ಸುದ್ದಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ 48.75 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ವಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ 48.75 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ವಶ

0
ಮಂಗಳೂರು ವಿಮಾನ ನಿಲ್ದಾಣದಲ್ಲಿ 48.75 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ವಶ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಬ್ಬರಿಂದ 625 ಗ್ರಾಂ ತೂಕದ 48.75 ಲಕ್ಷ ರೂ.ಮೌಲ್ಯದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 1 ಮತ್ತು 2 ರಂದು ಪ್ರಯಾಣಿಕರನ್ನು ತಪಾಸಣೆ ನಡೆಸುವಾಗ ಅನುಮಾನದ ಮೇಲೆ ಇಬ್ಬರು ಪ್ರಯಾಣಿಕರನ್ನು ತಡೆದು ಪರಿಶೀಲನೆ ನಡೆಸಿದಾಗ ಕಳ್ಳಸಾಗಣೆ ಚಟುವಟಿಕೆ ಪತ್ತೆಯಾಗಿದೆ.

ಕೇರಳದ ಕಾಸರಗೋಡಿನ ನಿವಾಸಿಗಳಾದ ಪ್ರಯಾಣಿಕರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದರು.

ಕಸ್ಟಮ್ಸ್ ತಂಡವು ಚೆಕ್-ಇನ್ ಬ್ಯಾಗೇಜ್‌ನಲ್ಲಿ ರಟ್ಟಿನ ಪೆಟ್ಟಿಗೆಯೊಳಗೆ ಮರೆಮಾಡಿ ಇಟ್ಟಿದ್ದ 1.41 ಲಕ್ಷ ಮೌಲ್ಯದ ಇ-ಸಿಗರೆಟ್‌ಗಳ ಪಾಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here