
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023ರ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಪಂದ್ಯ ನಡೆಯಲಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯವು ಅಕ್ಟೋಬರ್ 8ರಂದು ಎಂ.ಎ.ಚಿದಂಬರಂ ಸ್ಟೇಡಿಯಂ ಚೆನ್ನೈ ನಲ್ಲಿ ನಡೆಯಲಿದೆ. ಭಾರತ ಮತ್ತು ಅಫಘಾನಿಸ್ತಾನದ ನಡುವಿನ ಪಂದ್ಯವು ಅಕ್ಟೋಬರ್ 11ರಂದು ಅರುಣ್ ಜೇಟ್ಲಿ ಕ್ರೀಡಾಂಗಣ ದೆಹಲಿಯಲ್ಲಿ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನದ ನಡುವಣ ಪಂದ್ಯವು ಅಕ್ಟೋಬರ್ 15ರಂದು ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್ ನಲ್ಲಿ ನಡೆಯಲಿದೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪಂದ್ಯವು ಅಕ್ಟೋಬರ್ 19ರಂದು ಎಂಸಿಎ ಸ್ಟೇಡಿಯಂ, ಪುಣೆಯಲ್ಲಿ ನಡೆಯಲಿದೆ. ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಣ ಪಂದ್ಯವು ಅಕ್ಟೋಬರ್ 22ರಂದು ಹೆಚ್.ಪಿ.ಸಿ.ಎ ಸ್ಟೇಡಿಯಂ, ಧರ್ಮಶಾಲಾದಲ್ಲಿ ನಡೆಯಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯವು ಅಕ್ಟೋಬರ್ 29ರಂದು ಏಕನಾ ಕ್ರಿಕೆಟ್ ಸ್ಟೇಡಿಯಂ ಲಕ್ನೋದಲ್ಲಿ ನಡೆಯಲಿದೆ. 69 ಕ್ವಾಲಿಫೈಯರ್ 26 ಪಂದ್ಯವು ನವೆಂಬರ್ 2ರಂದು ವಾಂಖೆಡೆಸ್ಟೇಡಿಯಂ ಮುಂಬೈನಲ್ಲಿ ನಡೆಯಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ನವೆಂಬರ್ 5ರಂದು ಈಡನ್ ಗಾಡನ್ಸ್, ಕೋಲ್ಕತ್ತಾದಲ್ಲಿ ನಡೆಯಲಿದೆ. ಭಾರತ ಮತ್ತು ಕ್ವಾಲಿಫಯರ್ 1 ಪಂದ್ಯವು ನವೆಂಬರ್ 119, ಎಂ ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.
