Home ಅಂತರಾಷ್ಟ್ರೀಯ ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ: ಭಾರತದ ಕೆಲವು ಭಾಗಗಳಲ್ಲೂ ಕಂಪನದ ಅನುಭವ

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ: ಭಾರತದ ಕೆಲವು ಭಾಗಗಳಲ್ಲೂ ಕಂಪನದ ಅನುಭವ

ನವದೆಹಲಿ: ಅಫ್ಘಾನಿಸ್ತಾನದ ಹಿಂದೂ ಕುಶ್‌ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ 5.9 ತೀವ್ರತೆಯ ಭೂಕಂಪವು 75 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪನದಿಂದಾಗಿ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ ಎನ್ನಲಾಗಿದೆ. ದೆಹಲಿ – ಎನ್‌ಸಿಆರ್‌ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಭೂ ಕಂಪನದ ಅನುಭವವಾಗಿದೆ ಎನ್ನಲಾಗಿದೆ.

 
Previous articleಹಸಿ ಮೊಟ್ಟೆ ತಿಂದ್ರೆ ಎದುರಾಗುತ್ತೆ ಈ ಎಲ್ಲಾ ಸಮಸ್ಯೆಗಳು
Next articleವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ