Home ಸುದ್ದಿಗಳು ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಅ.5ರಂದು ಬಿಡುಗಡೆ

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಅ.5ರಂದು ಬಿಡುಗಡೆ

0
ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಅ.5ರಂದು ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣವನ್ನು ಸರ್ಕಾರ ಅಕ್ಟೋಬರ್ 5 ರಂದು ಬಿಡುಗಡೆ ಮಾಡಿದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ.

ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ.

ಯೋಜನೆಗೆ ನೊಂದಾಯಿಸಲು ಆಫ್​ಲೈನ್ ಮತ್ತು ಆನ್​ಲೈನ್ ಎರಡೂ ಮಾರ್ಗಗಳಲ್ಲಿ ಅವಕಾಶ ಇದೆ. ನಿಮ್ಮ ಗ್ರಾಮದ ಸಮೀಪ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಅಲ್ಲಿ ಖುದ್ದಾಗಿ ನೊಂದಾಯಿಸಿಕೊಳ್ಳಬಹುದು.

ಆನ್​ಲೈನ್​ನಲ್ಲಿ ಮಾಡಬೇಕೆಂದರೆ ಪಿಎಂ ಕಿಸಾನ್ ಸ್ಕೀಮ್​ನ ವೆಬ್​ಸೈಟ್​ಗೆ ಹೋಗಬೇಕು. ಅದರ ವಿಳಾಸ: pmkisan.gov.in/ ಇಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕಾಣಬಹುದು. ಅಲ್ಲಿ ಕ್ರಮಾವಳಿಗಳನ್ನು ಅನುಸರಿಸಿ ಯೋಜನೆಗೆ ನೊಂದಾಯಿಸಿಕೊಳ್ಳಲು ಸಾಧ್ಯವಿದೆ.

ಆಧಾರ್ ಕಾರ್ಡ್, ವೋಟರ್ ಐಡಿ, ಪಹಣಿ ಸರ್ಟಿಫಿಕೇಟ್, ಬ್ಯಾಂಕ್ ಖಾತೆ ಪ್ರತಿ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕು.

ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ.

ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್​ಗೆ ಅರ್ಹರಾಗಿರುತ್ತಾರೆ. ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದೆ.

 

LEAVE A REPLY

Please enter your comment!
Please enter your name here