Home ಸುದ್ದಿಗಳು ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Light to moderate rains across the state: Met department forecast

ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 
Previous articleಭಾಷಣ ಮಾಡುತ್ತಿದ್ದ ವೇಳೆ ಕುಸಿದುಬಿದ್ದ ಮಲ್ಲಿಕಾರ್ಜುನ್‌ ಖರ್ಗೆ: ಅರೋಗ್ಯ ವಿಚಾರಿಸಿದ ಪ್ರಧಾನಿ
Next articleಉತ್ತರ ಪ್ರದೇಶ: 5 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ