Home ಸುದ್ದಿಗಳು ರಾಷ್ಟ್ರೀಯ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ : 904 ಅಭ್ಯರ್ಥಿಗಳು ಕಣಕ್ಕೆ

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ : 904 ಅಭ್ಯರ್ಥಿಗಳು ಕಣಕ್ಕೆ

0
ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ : 904 ಅಭ್ಯರ್ಥಿಗಳು ಕಣಕ್ಕೆ

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ನಡೆಯಲಿದ್ದು, ಏಳನೇ ಹಂತದ ಮತದಾನದ ಮೂಲಕ ಈ ಬಾರಿಯ ಲೋಕಸಭಾ ಎಲೆಕ್ಷನ್‌ನ ಮತದಾನ ಪ್ರಕ್ರಿಯೆ ಕೊನೆಗೊಳ್ಳಲಿದೆ.

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನವು 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದ್ದು, ಒಟ್ಟು 904 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಬೆಳಿಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಆ ಮೂಲಕ ಸತತ 2 ತಿಂಗಳಿನಿಂದ ನಡೆಯುತ್ತಿದ್ದ ಮತದಾನ ಪ್ರಕ್ರಿಯೆ ಇಂದಿಗೆ ಮುಕ್ತಾಯಗೊಳ್ಳಲಿದೆ. ಜೂನ್‌ 4 ರಂದು ಮತದಾನ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಅಂದೇ ಚುನಾವಣಾ ಫಲಿತಾಂಶ ಕೂಡ ಹೊರಬೀಳಲಿದೆ.

 

LEAVE A REPLY

Please enter your comment!
Please enter your name here