Home ಸುದ್ದಿಗಳು ಹೈದರಾಬಾದ್: ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಬಂಧನ

ಹೈದರಾಬಾದ್: ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಬಂಧನ

0
ಹೈದರಾಬಾದ್: ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಬಂಧನ

ಹೈದರಾಬಾದ್: ಮಲಯಾಳಂ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಅವರನ್ನು ಬಂಧಿಸಿದ ಘಟನೆ ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಮಾಹಿತಿಯ ಮೇರೆಗೆ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ.

ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ (ಸಿಐಎಸ್​ಎಫ್) ನೀಡಿರುವ ದೂರಿನ ಆಧಾರದ ಮೇಲೆ ಎಫ್​ಐಆರ್ ಸಹ ದಾಖಲಾಗಿದೆ.

ಗೋವಾಕ್ಕೆ ಹೋಗುತ್ತಿದ್ದ ವಿನಾಯಕನ್, ಕನೆಕ್ಟಿಂಗ್ ಫ್ಲೈಟ್​ ಹತ್ತಲೆಂದು ಹೈದರಾಬಾದ್​ನಲ್ಲಿ ಇಳಿದಾಗ ವಿಮಾನ ನಿಲ್ದಾಣದ ಸಿಐಎಸ್​ಎಫ್ ಸಿಬ್ಬಂದಿ ಒಬ್ಬರೊಟ್ಟಿಗೆ ಜಗಳ ಮಾಡಿಕೊಂಡಿದ್ದು, ಹಲ್ಲೆ ಸಹ ಮಾಡಿದ್ದಾರೆ ಎಂದು ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ ಆರೋಪ ಮಾಡಿದ್ದಾರೆ.

ಮಲಯಾಳಂ ಪತ್ರಿಕೆ ಮನೋರಮಾ ಜೊತೆಗೆ ಮಾತನಾಡಿರುವ ವಿನಾಯಕನ್, ಸಿಐಎಸ್​ಎಫ್ ಸಿಬ್ಬಂದಿ ಕೆಲವರು ಅವರನ್ನು ಒಂದು ಕೋಣೆಗೆ ಕರೆದುಕೊಂಡು ಹೋಗಿ ಹಿಗ್ಗಾ-ಮುಗ್ಗ ಥಳಿಸಿದ್ದಾರಂತೆ. ಸಣ್ಣ ವಿಷಯಕ್ಕೆ ಭದ್ರತಾ ಸಿಬ್ಬಂದಿ ಜೊತೆಗೆ ವಿನಾಯಕನ್ ಜಗಳ ಮಾಡಿದ್ದಕ್ಕೆ ತಮಗೆ ಹೀಗೆ ಥಳಿಸಿದ್ದಾರೆಂದು ಅವರೇ ಹೇಳಿಕೊಂಡಿದ್ದಾರೆ.

‘ನಾನು ಯಾವುದೇ ತಪ್ಪು ಮಾಡಿಲ್ಲ ಬೇಕಿದ್ದರೆ ಸಾಕ್ಷ್ಯವಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು’ ಎಂದು ವಿನಾಯಕನ್ ಹೇಳಿದ್ದಾರೆ.

 

LEAVE A REPLY

Please enter your comment!
Please enter your name here