Home ಸುದ್ದಿಗಳು ಮಂಗಳೂರು: ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನ

ಮಂಗಳೂರು: ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನ

0
ಮಂಗಳೂರು: ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ತಾಲೂಕು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಹಸುವಿನ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕಿನ ಆಸಕ್ತ ರೈತರು ಜ.26ರೊಳಗೆ ಹೆಸರು ನೋಂದಾಯಿಸಲು ಕೋರಲಾಗಿದೆ. ಇಲಾಖೆಯಿಂದ ನಿಯೋಜಿಸಿದ ಆಯ್ಕೆ ಸಮಿತಿಯ ಮುಂದೆ ಹಸುವಿನ ಹಾಲನ್ನು ಕರೆದು, ಅಳತೆ ಮಾಡಿಸಲು ಒಪ್ಪಿಗೆ ನೀಡಬೇಕು. ಅತೀ ಹೆಚ್ಚು ಹಾಲು ಹಿಂಡುವ-ಪ್ರತಿ ದಿನಕ್ಕೆ 15 ಲೀ ಹಾಲು ಮತ್ತು ಮೇಲ್ಪಟ್ಟ ಹಸು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಪರ್ಧೆಯಲ್ಲಿ ಬಹುಮಾನ ಪಡೆದ ಬಳಿಕ ಕಾರ್ಯಕ್ರಮಕ್ಕೆ ಹಸುವನ್ನು ಸ್ವತಃ ಕರೆದುಕೊಂಡು ಬರಲು ಒಪ್ಪಿಗೆ ನೀಡುವಂತೆ ಸೂಚಿಸಲಾಗಿದೆ.

ನೋಂದಣಿ ಹಾಗೂ ಮಾಹಿತಿಗೆ ಡಾ.ವೆಂಕಟೇಶ್ ಎಸ್.ಎಂ. (ದೂ.ಸಂ: 9632550628), ಡಾ. ಅಶೋಕ್ ಕೆ.ಆರ್. (ದೂ.ಸಂ: 9243306956), ಡಾ.ರೇಖಾ ಎಂಟಿ.ದೂ.ಸಂ (9243306957) ಸಂಪರ್ಕಿಸಬಹುದು ಎಂದು ಮಂಗಳೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here